ಉಡುಪಿ: ರಾಜ್ಯದ ಮಹಿಳೆಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗಣೇಶ ಚತುರ್ಥಿಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ, ಗಣೇಶ ಚತುರ್ಥಿ ಒಳಗೆ ಜುಲೈ ತಿಂಗಳ ಹಣವೂ ಹಣ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.
ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದ್ದು, ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಜುಲೈ ತಿಂಗಳ ಹಣ ಜಮಾ ಆಗಲಿದ್ದು, ಐದನೇ ಕಂತಿನ ಹಣ ಬಾಕಿ ಉಳಿಯಲಿದೆ.