ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ( Private Hospital ) ಸಿಗುತ್ತಿರುವಂತ ಐವಿಎಫ್ ಚಿಕಿತ್ಸಾ ( IVF Treatment ) ಸೌಲಭ್ಯವನ್ನು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿಯೂ ದೊರೆಯುವಂತೆ, ಕ್ಲಿನಿಕ್ ಗಳನ್ನು ( IVF Clinic ) ಪ್ರಾರಂಭಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ.
ಈ ಸಂಬಂಧ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಗೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ವಾಣಿವಿಲಾಸ ಆಸ್ಪತ್ರೆಯು ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಬೆಳಗಾವಿ ಗಡಿ ವಿವಾದ : ಕರ್ನಾಟಕದಲ್ಲೂ ‘ಸಂಪೂರ್ಣ ಬಂದೋಬಸ್ತ್’ ಎಂದ ಸಿಎಂ ಬೊಮ್ಮಾಯಿ
ಈ ಕುರಿತಂತೆ ಪ್ರತಿಕ್ರಿಯಿಸಿದಂತ ಸಚಿವ ಸುಧಾಕರ್, ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಫಲಪತ್ತತೆ ದರ ಕುಸಿಯುತ್ತಿದೆ. ಇದರಿಂದಾಗಿ ಐವಿಎಫ್ ಚಿಕಿತ್ಸೆಗೆ ಬೇಡಿಕೆ ಹೆಚ್ಚುತ್ತಿದೆ. ಆದರೇ ಖಾಸಗೀ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆಗಾಗಿ ಹೆಚ್ಚು ವೆಚ್ಚ ಭರಿಸೋದಕ್ಕೆ ಬಡ, ಮಧ್ಯಮ ವರ್ಗದವರಿಗೆ ಕಷ್ಟವಾಗಿದೆ. ಹೀಗಾಗಿ ಸರ್ಕಾರಿ ವ್ಯವಸ್ಥೆಯಡಿ ಐವಿಎಫ್ ಚಿಕಿತ್ಸೆ ಪ್ರಾರಂಭಿಸುವ ಅಗ್ಯವಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದಿಂದ ಬೆಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಕಲಬುರಗಿಯಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ( Government Medical College ) ಐವಿಎಫ್ ಕ್ಲಿನಿಕ್ ಗಳನ್ನು ( IVF Clinic ) ಸ್ಥಾಪಿಸುವ ಯೋಜನೆಯಿದೆ. ಈ ಮೂಲಕ ಕೈಗೆಟುಕುವ ದರ ಅಥವಾ ಉಚಿತವಾಗಿ ಚಿಕಿತ್ಸೆ ಒದಗಿಸುವ ಯೋಚನೆಯಲ್ಲಿದ್ದೇವೆ ಎಂದರು.