ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮೀಯರಿಗೆ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪು ರಚನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮಿಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ತುಂಬಲು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಮಾದರಿಯಲ್ಲಿ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲಾಗುವುದು. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಫಲಾನುಭವಿಗಳನ್ನು ಒಳಗೊಂಡ ಜಂಟಿ ಹೊಣೆಗಾರಿಕೆ ಗುಂಪುಗಳನ್ನು ರಚಿಸಲು ನಿರ್ಧರಿಸಲಾಗಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ 500 ಗುಂಪುಗಳನ್ನು ರಚಿಸಲಾಗುವುದು. ಆಗಸ್ಟ್ 2ರಂದು ನಡೆಯಲಿರುವ ಅಂಗನವಾಡಿ ಕೇಂದ್ರಗಳ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
