ನವದೆಹಲಿ : ಕೇಂದ್ರ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯವು ದೇಶದ ಎಲ್ಲಾ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ನೀಡುತ್ತದೆ. ಈ ಯೋಜನೆಯನ್ನು ಅಂಚೆ ಕಚೇರಿಗಳು ಮತ್ತು ಕೆಲವು ಬ್ಯಾಂಕುಗಳ ಮೂಲಕ ಜಾರಿಗೆ ತರಲಾಗುತ್ತಿದೆ.
ಸುರಕ್ಷಿತ ಹೂಡಿಕೆ ಅವಕಾಶಗಳನ್ನು ಹುಡುಕುತ್ತಿರುವ ಮಹಿಳೆಯರು ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯಲ್ಲಿ ಹಣವನ್ನು ಉಳಿಸಬಹುದು. ಹುಡುಗಿಯರು ಸಹ ಈ ಯೋಜನೆಗೆ ಸೇರಬಹುದು. ಈ ಯೋಜನೆಯಲ್ಲಿ ಠೇವಣಿ ಇಡುವ ಮೊತ್ತವು ವರ್ಷಕ್ಕೆ ಶೇಕಡಾ 7.5 ರಷ್ಟು ಬಡ್ಡಿದರವನ್ನು ಪಡೆಯುತ್ತದೆ.
ನೀವು ಗರಿಷ್ಠ 2 ಲಕ್ಷ ರೂ.ವರೆಗೆ ಹೂಡಿಕೆ ಮಾಡಬಹುದು. ಮೆಚ್ಯೂರಿಟಿ ಮೊತ್ತವನ್ನು ಶೇಕಡಾ 7.5 ರಷ್ಟು ಬಡ್ಡಿದರದಲ್ಲಿ ಎರಡು ವರ್ಷಗಳ ಅವಧಿಗೆ ಪಡೆಯಬಹುದು.
ಭಾರತೀಯ ಪೌರತ್ವ ಹೊಂದಿರುವ ಎಲ್ಲಾ ಮಹಿಳೆಯರು ಈ ಯೋಜನೆಗೆ ಸೇರಬಹುದು. ಬಾಲಕಿಯರ ಪೋಷಕರು ತಮ್ಮ ಮಕ್ಕಳ ಹೆಸರಿನಲ್ಲಿ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು.
ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಗೆ ಸೇರಲು ಯಾವುದೇ ವಯಸ್ಸಿನ ಮಿತಿ ಇಲ್ಲ. ಮಹಿಳೆಯರು ಯಾವುದೇ ವಯಸ್ಸಿನಲ್ಲಿ ಈ ಯೋಜನೆಗೆ ಸೇರಬಹುದು. ಈ ಯೋಜನೆಯಡಿ ತೆರೆಯಲಾದ ಖಾತೆಯು ಪ್ರತ್ಯೇಕ ಖಾತೆಯಾಗಿರುತ್ತದೆ.