ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಪಂದ್ಯಗಳಿಗೆ ನಮ್ಮ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿ ಎಂ ಆರ್ ಸಿ ಎಲ್ ಮಾಹಿತಿ ನೀಡಿದ್ದು, ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ ಎಂದಿದೆ.
ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗಿದೆ ಎಂದಿದೆ.
ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್‌ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ರಾತ್ರಿ 11:55 ಕ್ಕೆ ಹೊರಡುತ್ತವೆ ಎಂದು ತಿಳಿಸಿದೆ.
ಪ್ರಯಾಣಿಕರು ಮೆಟ್ರೋ ಪ್ರಯಾಣಕ್ಕಾಗಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್‌ಗಳು (ಎನ್‌ಸಿಎಂಸಿ) ಮತ್ತು ಟೋಕನ್‌ಗಳನ್ನು ಬಳಸಿ ಪ್ರಯಾಣಿಸಬಹುದು ಎಂದು ಹೇಳಿದೆ.
GOOD NEWS: ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ಸುಗಳಲ್ಲಿ ಸ್ಯಾನ್ ಮಾಡಿ, ಪೇ ಮಾಡಲು ಅವಕಾಶ
BIG NEWS: ’60 ಲಕ್ಷ ದೇವರ ಹುಂಡಿ ಹಣ’ವನ್ನೇ ಪತ್ನಿ ಖಾತೆಗೆ ವರ್ಗಾಯಿಸಿದ ‘ಅಧಿಕಾರಿ ಸಸ್ಪೆಂಡ್’
BREAKING : ಪಾಕ್ ತಂಡಕ್ಕೆ ಮತ್ತೊಂದು ಶಾಕ್ : `ಚಾಂಪಿಯನ್ಸ್ ಟ್ರೋಫಿ’ಯಿಂದ `ಫಖರ್ ಜಮಾನ್’ ಔಟ್.!