Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ :ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಯಮ 2025 ಜಾರಿ
KARNATAKA

ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಗುಡ್ ನ್ಯೂಸ್ :ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಯಮ 2025 ಜಾರಿ

By kannadanewsnow5724/09/2025 6:33 AM

ಹಾಸನ : ರಾಜ್ಯದಲ್ಲಿ ಆನ್ ಲೈನ್ ಪ್ಲಾಟ್ ಫಾರಂನಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರು 4 ರಿಂದ 5 ಲಕ್ಷ ಜನ ಇದ್ದಾರೆ ಇವರನ್ನು ಇಲಾಖೆ ವ್ಯಾಪ್ತಿಗೆ ತರುವ ಮೂಲಕ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಅಧಿನಿಮಯ 2025 ಅನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ತಿಳಿಸಿದ್ದಾರೆ.

ನಗರದ ಮಲೆನಾಡು ಇಂಜಿನಿಯರಿAಗ್ ಕಾಲೇಜಿನ ಆಡಿಟೋರಿಯಮ್‌ನಲ್ಲಿಂದು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಬೆಂಗಳೂರು, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಾಸನ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿ ದ ಅವರು ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದೆಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ನೋಂದಾಯಿಸಿ ಸಾಮಾಜಿಕ ಭದ್ರತೆ ಒದಗಿಸಲಾಗುತ್ತಿದೆ ಎಂದರು.

ಚಾಲಕ, ನಿರ್ವಾಹಕ, ಕ್ಲೀನರ್, ಬುಕ್ಕಿಂಗ್ ಗುಮಾಸ್ತ, ನಗದು ಗುಮಾಸ್ತ, ಕಾವಲುಗಾರ ಪರಿಚಾಲಕ, ಮೋಟರ್ ಗ್ಯಾರೇಜುಗಳಲ್ಲಿ ಎಲೆಕ್ಟ್ರಿಕಲ್ ಹಾಗೂ ಎಸಿ ಘಟಕಗಳಲ್ಲಿ ಇತರೆ ಕೆಲಸ ಮಾಡುತ್ತಿರುವ ಸುಮಾರು 10 ಲಕ್ಷ ಕಾರ್ಮಿಕರ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ದಿ ಮಂಡಳಿಯಲ್ಲಿ ನೋಂದಾಯಿ ಸಿಕೊಂಡಿದ್ದಾರೆ ಹಾಸನ ಜಿಲ್ಲೆಯಲ್ಲಿ 37,000 ಜನ ನೋಂದಾಯಿಸಿದ್ದಾರೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ ಎಂದರು.

ಆಶಾ ದೀಪ ಯೋಜನೆಯನ್ನು ಜಾರಿಗೊಳಿಸಿದ್ದು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮಕ್ಕಳಿಗೆ ಕೆಲಸ ಕೊಟ್ಟರೆ ಅಂತವರಿಗೆ ಶೇ. 50 ಸಂಬಳ ಕೊಡಲಾಗುವುದು. ರಾಜ್ಯದ 7 ಸಾವಿರ ಮಕ್ಕಳಿಗೆ ಕೆಲಸ ಸಿಕ್ಕಿದ್ದು, 2 ವರ್ಷಗಳವರೆಗೆ ಸಂಬಳ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

24,400 ಮಕ್ಕಳಿಗೆ 20 ಕೋಟಿ, 9 ಕೋಟಿ ರೂ.ವಿವಾಹ ಪ್ರೋತ್ಸಾಹ ಧನ, 3 ಕೋಟಿ ವೈದ್ಯಕೀಯ ಸೌಲಭ್ಯಕ್ಕಾಗಿ, ವಿವಿಧ ಯೋಜನೆಗಳಡಿಯಲ್ಲಿ 54 ಕೋಟಿ ರೂ ಗಳನ್ನು ಜಿಲ್ಲೆಯ ಕಾರ್ಮಿಕರಿಗೆ ನೀಡಿದ್ದೇವೆ ಎಂದರು

ಸರ್ಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವವರ ಶ್ರೇಯೋಭಿವೃದ್ಧಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಮಿಕರ ವಿವಿದ್ದೋಶ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕ ನಿಯೋಜಿಸಿಕೊಳ್ಳಲು ಯೋಜಿಸಲಾಗಿದ್ದು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ನಮ್ಮ ಸರ್ಕಾರ ಐದು ಗ್ಯಾರೆಂಟಿಗಳ ಮೂಲಕ ವರ್ಷಕ್ಕೆ 60 ಸಾವಿರ ಕೋಟಿ ವೆಚ್ಚ ಮಾಡುತ್ತದೆ, 3 ಲಕ್ಷ ಕೋಟಿ ರೂಪಾಯಿಯನ್ನು ಬಡವರಿಗೆ ವೆಚ್ಚ ಮಾಡುತ್ತಿದ್ದೇವೆ ಎಂದರು. ಶಕ್ತಿ ಯೋಜನೆಯಿಂದ 500 ಕೋಟಿ ಹೆಣ್ಣು ಮಕ್ಕಳು ಪ್ರಯಾಣ ಮಾಡುವ ಮೂಲಕ ರಾಜ್ಯದ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಸೆಸ್‌ನಲ್ಲಿ ಶ್ರಮಿಕ ವರ್ಗ ಹಣವನ್ನು ಮೀಸಲಿಟ್ಟು ಇಲಾಖೆಯ ಮೂಲಕ ಸುಮಾರು 1.30 ಕೋಟಿ ಕಾರ್ಮಿಕ ಶ್ರಮಿಕ ವರ್ಗಗಳಿಗೆ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಆಶ್ರೀತ ಕುಟುಂಬಕ್ಕೆ 15 ಲಕ್ಷ ಪರಿಹಾರ ನೀಡುವ ಕುರಿತು ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಮುಖ್ಯಮಂತ್ರಿಗಳಿAದ ಅನುಮೋದನೆ ಪಡೆದು ಜಾರಿಗೊಳಿಸಲಾಗುವುದು ಎಂದರು.

 ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ ಶಿವಲಿಂಗೇಗೌಡ ಅವರು ಮಾತನಾಡಿ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡುವುದರ ಜೊತೆಗೆ ಕಾರ್ಮಿಕ ಇಲಾಖೆ ಯಲ್ಲಿ ಜನೋಪಯೋಗಿ ಕೆಲಸ ಮಾಡಬಹುದು ಎಂಬುದನ್ನು ಕಾರ್ಮಿಕ ಸಚಿವರು ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ನೋದಾಯಿಸಿಕೊಳ್ಳಬೇಕು, ಕಷ್ಟದಲ್ಲಿರುವ ಕಾರ್ಮಿಕರು ಹಾಗೂ ಶ್ರಮಿಕ ವರ್ಗ ಸಂತೋಷವಾಗಿರಬೇಕು ಆಗ ಮಾತ್ರ ದೇಶದಲ್ಲಿ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.

ಸಂತೋಷ್ ಲಾಡ್ ಅವರ ದೂರದೃಷ್ಟಿ, ಕಾಳಜಿ ಮೆಚ್ಚುವಂತಹುದು, ಕಾರ್ಮಿಕರ ಮಕ್ಕಳ ವ್ಯಾಸಂಗಕ್ಕಾಗಿ ವಸತಿ ನಿಲಯ ತಂದಿದ್ದಾರೆ ಅದಕ್ಕೆ 32 ಕೋಟಿ ರೂ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಅರಸೀಕೆರೆ ತಾಲ್ಲೂಕಿಗೆ ಮಂಜೂರಾತಿಯಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಸAಸದರಾದ ಶ್ರೇಯಸ್ ಎಂ ಪಟೇಲ್ ಅವರು ಮಾತನಾಡಿ ಕಾರ್ಮಿಕರ ಏಳಿಗಾಗಿ ದುಡಿಯುತ್ತಿರುವ ಕಾರ್ಮಿಕ ಸಚಿವರು 101 ವರ್ಗಗಳಿಗೆ ಸ್ಮಾರ್ಟ್ ಕಾರ್ಡ್ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಮಿಕರು ಹಾಸನ ಜಿಲ್ಲೆಯಲ್ಲಿ 4,53,084 ನೋಂದಾಯಿಸಿಕೊAಡಿದ್ದಾರೆ. ಸರ್ಕಾರ ಕಾರ್ಮಿಕರನ್ನು ಗುರುತಿಸುವ ಕೆಲಸವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಶಾಸಕರಾದ ಸ್ವರೂಪ್ ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಕಾರ್ಮಿಕರ ಪರವಾಗಿ ಶ್ರದ್ಧೆಯಿಂದ ಸಚಿವರು ಕೆಲಸ ಮಾಡುತ್ತಿದ್ದಾರೆ. 25 ರಿಂದ 101 ವಲಯಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅರ್ಹರು ಇದರ ಪ್ರಯೋಜನ ಪಡೆಯಬೇಕು ಐತಿಹಾಸಿಕ ಯೋಜನೆಯನ್ನು ರೂಪಿಸಿದ್ದಾರೆ ಈ ಯೋಜನೆಗಳನ್ನು ಎಲ್ಲಾ ಕಾರ್ಮಿಕರು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಡೂರು ಕ್ಷೇತ್ರದ ಶಾಸಕರಾದ ಆನಂದ್, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಹಿಸಿನ್, ಕಾರ್ಮಿಕ ಇಲಾಖೆ ಆಯುಕ್ತÀರಾದ ಹೆಚ್.ಎನ್. ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Good news for workers from the state government: Workers' Social Security and Welfare Act 2025 implemented
Share. Facebook Twitter LinkedIn WhatsApp Email

Related Posts

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM1 Min Read

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM4 Mins Read

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM1 Min Read
Recent News

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

11/01/2026 9:08 PM

BREAKING: ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 650 ಸಿಕ್ಸರ್‌ ಬಾರಿಸಿದ ಮೊದಲ ಆಟಗಾರ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರ | Rohit Sharma

11/01/2026 8:50 PM

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM
State News
KARNATAKA

ಉತ್ತರಕನ್ನಡ : ಪ್ರೀತ್ಸೆ ಎಂದು ಹಿಂದೆ ಬಿದ್ದ ಪಾಗಲ್ ಪ್ರೇಮಿ : ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

By kannadanewsnow0511/01/2026 9:08 PM KARNATAKA 1 Min Read

ಉತ್ತರಕನ್ನಡ : ಪಾಗಲ್ ಪ್ರೇಮಿ ಒಬ್ಬ ಪ್ರೀತ್ಸೆ ಎಂದು ಯುವತಿಯ ಹಿಂದೆ ಬಿದ್ದಿದ್ದಾನೆ ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ…

ರೈತರು ಮತ್ತೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸಂಸದ ಬಸವರಾಜ ಬೊಮ್ಮಾಯಿ

11/01/2026 8:29 PM

40ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ಕ್ಕೆ ಮುಹೂರ್ತ ಫಿಕ್ಸ್: ಬೀದರ್ ನಲ್ಲಿ ‘KUWJ ಸಮ್ಮೇಳನ’

11/01/2026 7:56 PM

ಮಂಗಳೂರಿನಲ್ಲಿ ಘೋರ ಘಟನೆ : ಚುರುಮುರಿ ಸ್ಟಾಲ್ ಗೆ ಬಂದ ಹಸುವಿಗೆ ಚೂರಿ ಇರಿದ ಪಾಪಿ!

11/01/2026 7:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.