ಬೆಂಗಳೂರು : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ವರ್ಗಗಳಾದ ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೊಟೋಗ್ರಾಫರ್ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆಂಡಾಲ್ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಅಸಂಘಟಿತ ವಿಕಲಚೇತನ ಕಾರ್ಮಿಕರು, ಅಲೆಮಾರಿ ಪಂಗಡದ ಅಸಂಘಟಿತ ಕಾರ್ಮಿಕರು ಮತ್ತು ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ಮಾಹಿತಿ ಅವಶ್ಯಕತೆಯಿದ್ದು, ವಿವಿಧ-ಸಂಘ-ಸಂಸ್ಥೆಗಳಲ್ಲಿ ನೋಂದಣಿಯಾದ ಕಾರ್ಮಿಕರ ದತ್ತಾಂಶ ಸಂಗ್ರಹಿಸಬೇಕಾಗಿರುತ್ತದೆ.
ಕಾರ್ಮಿಕ ಸಂಘಗಳಲ್ಲಿ ನೋಂದಾಯಿಸದೇ ಇರುವ ಇತರೆ ಕಾರ್ಮಿಕರನ್ನೂ ಸಹ ಹೊಸದಾಗಿ ಅಭಿವೃದ್ಧಿಪಡಿಸಿದ ತಂತ್ರಾಂಶದಲ್ಲಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲು ಕಾರ್ಮಿಕ ಇಲಾಖೆಯಿಂದ ಉದ್ದೇಶಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ಕಾರ್ಮಿಕರ ವರ್ಗಗಳ ಸಂಘ-ಸಂಸ್ಥೆಗಳು ತಮ್ಮ ಸಂಘದಲ್ಲಿ ನೋಂದಾಯಿಸಿದ ಸದಸ್ಯರ ಮಾಹಿತಿಯನ್ನು ಕಾರ್ಮಿಕ ಅಧಿಕಾರಿಯವರ ಕಛೇರಿ, ಬೆಂಗಳೂರು ಗ್ರಾಮಾಂತರ ಉಪ ವಿಭಾಗ, ಸೋಮೇಶ್ವರ ಬಡಾವಣೆ, 2 ನೇ ಬ್ಲಾಕ್, 5 ನೇ ಮುಖ್ಯ ರಸ್ತೆ, ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.