Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ `ಸ್ಮಾರ್ಟ್ ಕಾರ್ಡ್’ ವಿತರಣೆಗೆ ಆದೇಶ.!
KARNATAKA

ರಾಜ್ಯ ಸರ್ಕಾರದಿಂದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ `ಸ್ಮಾರ್ಟ್ ಕಾರ್ಡ್’ ವಿತರಣೆಗೆ ಆದೇಶ.!

By kannadanewsnow5726/02/2025 5:55 AM

ಧಾರವಾಡ : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು, ಅಸಂಘಟಿತ ಕಾರ್ಮಿಕರಾದ ಹಮಾಲರು, ಚಿಂದಿ ಆಯುವವರು, ಮನೆಗೆಲಸದವರು, ಟೈಲರ್, ಮೆಕ್ಯಾನಿಕ್, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 11 ವರ್ಗಗಳನ್ನು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಆದೇಶಿಸಿದೆ.

ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೆÇೀಟೋಗ್ರಾಫರ್‍ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ, ಸಭಾ ಭವನ, ಟೆಂಟ್, ಪೆಂಡಾಲ್‍ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರು, ಅಸಂಘಟಿತ ವಿಕಲಚೇತನ ಕಾರ್ಮಿಕ ಅಲೆಮಾರಿ ಪಂಗಡ ಒಳಗೊಂಡಂತೆ ಒಟ್ಟು 23 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನೋಂದಾಯಿಸಿ, ಸ್ಮಾರ್ಟ್ ಕಾರ್ಡ್ ವಿತರಿಸಲು ಅನುಮತಿಸಿದೆ.

ಅರ್ಹತೆಗಳು: ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯಡಿ ಫಲಾನುಭವಿಗಳಾಗಲು, ಕಾರ್ಮಿಕರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಅರ್ಜಿದಾರರು 18 ರಿಂದ 60 ವರ್ಷದೊಳಗಿರಬೇಕು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಡಿ ನೋಂದಾಯಿತರಾಗಿ ಸಂಬಂಧಿಸಿದ ವೃತ್ತಿಯಲ್ಲಿ ಸಕ್ರಿಯನಾಗಿರಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಅಪಘಾತ ಪರಿಹಾರ ಸೌಲಭ್ಯ: ಅಂಬೇಡ್ಕರ ಸಹಾಯ ಹಸ್ತ ಯೋಜನೆಯಡಿ ನೋಂದಾಯಿತರಾದ ಕಾರ್ಮಿಕರ ಮರಣ ಪ್ರಕರಣದಲ್ಲಿ ತಲಾ ರೂ.1 ಲಕ್ಷ ರೂ.ಗಳು ಮತ್ತು ಅಪಘಾತ ಗಂಭೀರತೆ ಆಧಾರದಲ್ಲಿ (ಶೇಕಡವಾರು ದುರ್ಬಲತೆ ಆಧಾರದ ಮೇಲೆ) ರೂ. 1 ಲಕ್ಷದವರೆಗೆ, ಆಸ್ಪತ್ರೆ ವೆಚ್ಚ ಮರುಪಾವತಿ ರೂ.50,000, ಸಹಜ ಮರಣ ಪರಿಹಾರ (ಅಂತ್ಯ ಕ್ರಿಯೆ ಧನಸಹಾಯ) ವೆಚ್ಚ ರೂ. 10,000 ಪರಿಹಾರ ನೀಡಲಾಗುತ್ತದೆ.

ಪರಿಹಾರ ಪಡೆಯುವ (ಕ್ಷೇಮ್) ವಿಧಾನ: ಅರ್ಜಿದಾರ ಅಥವಾ ಫಲಾನುಭವಿಯು ಅಪಘಾತ ಪರಿಹಾರಕ್ಕಾಗಿ ಅಪಘಾತ ಸಂಭವಿಸಿದ 1 ವರ್ಷದೊಳಗೆ ಹಾಗೂ ಸಹಜ ಮರಣ ಪ್ರಕರಣಗಳಲ್ಲಿ ಮರಣ ದಿನಾಂಕದಿಂದ 6 ತಿಂಗಳ ಅವಧಿಯೊಳಗೆ ನಿಗದಿತ ನಮೂನೆಯಲ್ಲಿ ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಗತ್ಯ ದಾಖಲೆಗಳು: ಅರ್ಜಿದಾರನು ತನ್ನ ನೋಂದಾಯಿತ ಗುರುತಿನ ಚೀಟಿ, ನಿಗದಿತ ನಮೂನೆಯಲ್ಲಿ ಉದ್ಯೋಗ ಪ್ರಮಾಣ ಪತ್ರ, ಪ್ರಥಮ ವರ್ತಮಾನ ವರದಿ ಪ್ರತಿ, ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಆಸ್ಪತ್ರೆಯ ಮೂಲ ಬಿಲ್‍ಗಳು, ಆಸ್ಪತ್ರೆ ವೆಚ್ಚ ಮರುಪಾವತಿ ಪ್ರಕರಣಗಳಲ್ಲಿ, ಮೂಲ ಡಿಸ್ಮಾರ್ಜ್ ಸಾರಾಂಶ, ಸರ್ಕಾರಿ ವೈದ್ಯಕೀಯ ದುರ್ಬಲತೆ ಪ್ರಮಾಣ ಪತ್ರ, ಕಂದಾಯ ಇಲಾಖೆಯ ವಂಶ ವೃಕ್ಷ ಪ್ರಮಾಣ ಪತ್ರ, ಪಡಿತರ ಚೀಟಿ, ಫಲಾನುಭವಿಯ ಆಧಾರ ಕಾರ್ಡ್ ಪ್ರತಿ, ನಾಮನಿರ್ದೇಶಿತರ, ಫಲಾನುಭವಿಯ ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಮತ್ತು ಇತರೆ ದಾಖಲಾಲೆಗಳನ್ನು ಸಲ್ಲಿಸಬೇಕು.

ಸಹಜ ಮರಣ ಪರಿಹಾರ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು: ನೋಂದಾಯಿತ ಗುರುತಿನ ಚೀಟಿ, ಮರಣ ಪ್ರಮಾಣ ಪತ್ರ, ಪಡಿತರ ಚೀಟಿ, ಫಲಾನುಭವಿ ಮತ್ತು ನಾಮನಿರ್ದೇಶಿತರ ಆಧಾರ ಕಾರ್ಡ್ ಪ್ರತಿ, ನಾಮನಿರ್ದೇಶಿತರ ಬ್ಯಾಂಕ್ ಪಾಸ್‍ಬುಕ್ ಪ್ರತಿ ಹಾಗೂ ಅವಶ್ಯಕವಿರುವ ಇತರೆ ದಾಖಲಾತಿಗಳು. ಎಲ್ಲಾ ಪರಿಹಾರ ಮೊತ್ತವನ್ನು ಫಲಾನುಭವಿ, ನಾಮನಿರ್ದೇಶಿತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಫಲಾನುಭವಿಯು ಮರಣದ ಸಮಯದಲ್ಲಿ ಅವಿವಾಹಿತನಾಗಿದ್ದಲ್ಲಿ ತಾಯಿ ತಂದೆ ಹಾಗೂ ವಿವಾಹಿತನಾಗಿದ್ದಲ್ಲಿ ಹೆಂಡತಿ ಮತ್ತು ಮಕ್ಕಳು ಕಾನೂನುಬದ್ಧ ವಾರಸುದಾರರಾಗಿರುತ್ತಾರೆ.

ಕ್ಷೇಮ್ ಅರ್ಜಿ ತಿರಸ್ಕರಿಸಲು ಕಾರಣಗಳು: ಫಲಾನುಭವಿಯು ಆತ್ಮಹತ್ಯೆ, ಅಪಘಾತದ ವೇಳೆ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿದಲ್ಲಿ, ಬುದ್ಧಿಭ್ರಮಣೆಯ ಕಾರಣ ಅಪಘಾತ ಸಂಭವಿಸಿದಲ್ಲಿ, ಫಲಾನುಭವಿಯು ಅಪರಾಧದ ಉದ್ದೇಶದ ಕಾನೂನು ಉಲ್ಲಂಘನೆಯ ಕಾರಣ ಅಪಘಾತ ಸಂಭವಿಸಿದಲ್ಲಿ, ಯುದ್ಧ, ಆಕ್ರಮಣ, ವಿದೇಶಿ ವೈರಿಯ ಕೃತಿ, ದಂಗೆ, ಕ್ರಾಂತಿ, ಮಿಲಿಟರಿ ಅಥವಾ ಅಧಿಕಾರ ಕಿತ್ತುಕೊಳ್ಳುವುದು, ಹಿಡಿತ ಸೆರೆಹಿಡಿ, ಬಂಧನ ಕಾರಣದಿಂದಾಗಿ ಸಂಭವಿಸಿದ ಅಪಘಾತದಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಫಲಾನುಭವಿಗಳಾದ ಅಸಂಘಟಿತ ವಲಯದ ಕಾರ್ಮಿಕರು ಈ ಅಂಬೇಡ್ಕರ ಸಹಾಯ ಹಸ್ತ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವರು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for 'workers': State govt orders issuance of 'smart cards' under Labour Sahayata Hasta Scheme
Share. Facebook Twitter LinkedIn WhatsApp Email

Related Posts

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM1 Min Read

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM1 Min Read

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM2 Mins Read
Recent News

BREAKING: ಕುಡಿದು ವಾಹನ ಚಾಲನೆ: ಕ್ಯಾಲಿಫೋರ್ನಿಯಾದಲ್ಲಿ ಪಾಪ್ ತಾರೆ ಬ್ರಿಟ್ನಿ ಸ್ಪಿಯರ್ಸ್ ಅರೆಸ್ಟ್

05/03/2026 10:04 PM

‘ಆಧಾರ್ ಕಾರ್ಡ್’ನಲ್ಲಿ ಮತ್ತೊಂದು ಬಿಗ್ ಅಪ್ಡೇಟ್ ; ‘UIDAI’ ಮಹತ್ವದ ಘೋಷಣೆ!

05/03/2026 9:59 PM

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

05/03/2026 9:56 PM

ಇರಾನ್ ಯುದ್ಧ ನೌಕೆ ಮುಳುಗಡೆ ; ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಿಮಾನ, 2 ಯುದ್ಧನೌಕೆಗಳ ನಿಯೋಜನೆ!

05/03/2026 9:45 PM
State News
KARNATAKA

​’ಪ್ರಜಾ ಸಮರ’ ಪತ್ರಿಕೆಯ ನೂತನ ಮುದ್ರಣಾಲಯಕ್ಕೆ ಚಾಲನೆ: ಅಕ್ಷರ ಲೋಕದ ಹೊಸ ಪಯಣಕ್ಕೆ ಮುನ್ನುಡಿ

By kannadanewsnow0905/03/2026 9:56 PM KARNATAKA 1 Min Read

​ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನಸಾಮಾನ್ಯರ ಧ್ವನಿಯಾಗಿ ಹೊರಹೊಮ್ಮುತ್ತಿರುವ ‘ಪ್ರಜಾ ಸಮರ’ ಪತ್ರಿಕೆಯು ಈಗ ತನ್ನದೇ ಆದ ನೂತನ…

BREAKING: ಗುವಾಟಿಯಲ್ಲಿ ರೇಡಾರ್ ಸಂಪರ್ಕ ಕಳೆದುಕೊಂಡು ಸುಖೋಯ್-30 MKI ಯುದ್ಧ ವಿಮಾನ ನಾಪತ್ತೆ | Su-30 MKI fighter aircraft

05/03/2026 9:32 PM

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ನಿಮ್ಮ ‘ಮೊಬೈಲ್’ನಲ್ಲಿ ಈ ‘ತುರ್ತು ದೂರವಾಣಿ ಸಂಖ್ಯೆ’ಗಳು ಇರಲಿ

05/03/2026 9:25 PM

ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

05/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.