ಬೆಂಗಳೂರು: ರಾಜ್ಯದ ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಇನ್ಮುಂದೆ ಯೋಜನೆಯಡಿ 1 ವಾರದೊಳಗೆ ಚಿಕಿತ್ಸೆ ಬಿಲ್ ಪಾವತಿಸುವಂತ ವ್ಯವಸ್ಥೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ.
ಈ ಕುರಿತಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮಾಹಿತಿ ಹಂಚಿಕೊಂಡಿದ್ದು, ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಒಂದು ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಾಗೆಯೇ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಚಿಕಿತ್ಸಾ ದರಕ್ಕೆ ಸಮಾನವಾಗಿ ಪರಿಷಅಕರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಒಟ್ಟಾರೆಯಾಗಿ ಯಶಸ್ವಿನಿ ಯೋಜನೆಯಡಿ ಚಿಕಿತ್ಸಾ ದರವನ್ನು ಕೇಂದ್ರದ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯ ದರಕ್ಕೆ ಸಮಾನವಾಗಿ ಪರಿಷ್ಕರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಖಾಸಗಿ ಆಸ್ಪತ್ರೆಗಳು ಸಮ್ಮತಿಸಿವೆ ಎಂದು ಸಹಕಾರಿ ಸಚಿವ ಕೆ. ಎನ್. ರಾಜಣ್ಣ ತಿಳಿಸಿದ್ದಾರೆ.
‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಫೆ.19, 20ರಂದು ರಾಜ್ಯಮಟ್ಟದ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ
BREAKING : ‘CUET PG 2024’ ನೋಂದಣಿ ಗಡುವು ವಿಸ್ತರಣೆ ; ಫೆ.7ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ