ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಯಲ್ಲಿ ಯುವಕ/ ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿ ನೀಡಲಾಗುವುದು, ಈ ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯು 15 ದಿವಸಗಳ ವಸತಿ ಸಹಿತ ತರಬೇತಿಯಾಗಿದ್ದು 10 ದಿವಸ ಕ್ಲಾಸ್ ರೂಮ್ ಮತ್ತು 5 ದಿವಸ ಪ್ರಾಯೋಗಿಕ ತರಬೇತಿ ಇರುತ್ತದೆ. ವಿದ್ಯಾರ್ಹತೆ ತರಬೇತಿಗೆ ಅಗತ್ಯವಿರುವಂತೆ ವಾಸದ ವ್ಯವಸ್ಥೆ, ಊಟ, ಉಪಹಾರ ಇತ್ಯಾದಿಗಳನ್ನು ತರಬೇತಿಯಲ್ಲಿ ನೀಡಲಾಗುವುದು. ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ವಯೋಮಿತಿ 18-45 ವರ್ಷ ಆಗಿರುತ್ತದೆ.
ನಿಗಮದ ವೆಬ್ಸೈಟ್: https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-201449 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್, 05 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.