ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಆಯವ್ಯಯದಡಿ ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳಿಗೆ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರು, ಪರಿಶಿಷ್ಟ ಜಾತಿ / ಪಂಗಡಗಳು, ಆರ್ಥಿಕವಾಗಿ ಹಿಂದುಳಿದವರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ತೃತೀಯ ಲಿಂಗಿಗಳು ಹಾಗೂ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅನುಷ್ಠಾನಗೊಳ್ಳುವ ಕಲ್ಯಾಣ ಕಾರ್ಯಕ್ರಮಗಳು
ಒಂಟಿ ಮನೆ ನಿರ್ಮಾಣ ಮತ್ತು ಅಮೃತ ಮಹೋತ್ಸವ ಯೋಜನೆಯಡಿ ಫ್ಲಾಟ್ ಖರೀದಿಗೆ ಧನ ಸಹಾಯ
ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
ಪೌರ ಕಾರ್ಮಿಕರು ಹಾಗೂ ಉದ್ಯೋಗಸ್ಥ ಮಹಿಳೆಯರಿಗೆ ಎಲೆಕ್ನಿಕ್ ದ್ವಿಚಕ್ರ ವಾಹನ ವಿತರಣೆ (ಗಾರ್ಮೆಂಟ್ಸ್ ಉದ್ಯೋಗಿಗಳಿಗೆ ಪ್ರಥಮ ಆದ್ಯತೆ)
ವಿಶೇಷ ಚೇತನರಿಗೆ ಹೆಚ್ಚುವರಿ ಚಕ್ರ ಅಳವಡಿಸಿದ ಎಲೆಕ್ನಿಕ್ ತ್ರಿಚಕ್ರ ವಾಹನ ಮತ್ತು ವೀಲ್‌ಚೇರ್ ವಿತರಣೆ
ಗಂಭೀರ ಕಾಯಿಲೆ, ಹಿರಿಯ ನಾಗರಿಕರ ಆರೋಗ್ಯ ತಪಾಸಣೆ, ಅಂಗ ವೈಫಲ್ಯ ಶಸ್ತ್ರ ಚಿಕಿತ್ಸೆಗೆ ಧನಸಹಾಯ
ಬೀದಿಬದಿ ವ್ಯಾಪಾರಸ್ಥರಿಗೆ ಎಲೆಕ್ನಿಕ್ ವೆಂಡಿಂಗ್ ಮೆಷಿನ್ ವಿತರಣೆ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ವರ್ಗಗಳ ಪೌರಕಾರ್ಮಿಕ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಸಂಗೀತ ಸಾಧನ ಖರೀದಿ, ಕ್ರೀಡಾಪಟುಗಳಿಗೆ ಸಹಾಯಧನ, ಸ್ವಯಂ ಉದ್ಯೋಗ, ವಿಶೇಷ ಚೇತನರಿಗೆ ಔಷಧಿ ಅಂಗಡಿ ಪ್ರಾರಂಭ, ಆಟೋ / ಕಾರು ಖರೀದಿಗೆ ಸಹಾಯ
ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ
ಸಾಂಸ್ಕೃತಿಕ ಹಾಗೂ ವಿಶೇಷಚೇತನ ವಿದ್ಯಾ ಸಂಸ್ಥೆಗಳಗೆ ಆರ್ಥಿಕ ನೆರವು
ಶಾಲಾ ಶುಲ್ಕ ಮರುಪಾವತಿ, ಉನ್ನತ / ವಿದೇಶ ವ್ಯಾಸಂಗಕ್ಕೆ ಸಹಾಯಧನ
ಅರ್ಜಿಗಳನ್ನು ಸಂಬಂಧಿತ ವಲಯ ಸಹಾಯಕ ಕಂದಾಯ ಅಧಿಕಾರಿ(ಕಲ್ಯಾಣ) ಕಛೇರಿಯಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು. ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಲು ಈ ದಿನಾಂಕವನ್ನು ವಿಸ್ತರಿಸಲಾಗಿದೆ.
ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಸಾರ್ವಜನಿಕರು ಕಲ್ಯಾಣ ಕಾರ್ಯಕ್ರಮದ ಫಲಾನುಭವಿಗಳಾಗಬೇಕೆಂಬ ಉದ್ದೇಶದಿಂದ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ರವರ ನಿರ್ದೇಶನದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನ 02-05-2025ರವರೆಗೆ ವಿಸ್ತರಿಸಲಾಗಿದೆ.