ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಋುತುಚಕ್ರ ರಜೆ ಮಂಜೂರು ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ(1)ರ ಪತ್ರದಲ್ಲಿ (ಪ್ರತಿ ಲಗತ್ತಿಸಿದೆ) ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ: 15.11.20250 ಮನವಿಯಲ್ಲಿ ಕಾರ್ಮಿಕ ಇಲಾಖೆಯ ಆದೇಶದಂತೆ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಶಿಕ್ಷಕಿಯರಿಗೆ 1 ದಿನ ವೇತನ ಸಹಿತ ಋತುಚಕ್ರ ರಜೆಯ ಆದೇಶವನ್ನು ಹೊರಡಿಸಬೇಕಾಗಿ ಕೋರಿರುತ್ತಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಕಿಯರಿಗೆ ವೇತನ ಸಹಿತ ಋುತುಚಕ್ರ ರಜೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿತ್ತು. ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಉಲ್ಲೇಖಿಸಿರುವ ಇಲಾಖೆ, ಸರಕಾರದ ಸೂಚನೆಯಂತೆ ವೇತನ ಸಹಿತ ರಜೆ ಮಂಜೂರು ಮಾಡಲಾಗಿದೆ. ಸರ್ಕಾರಿ ಶಾಲೆ ಶಿಕ್ಷಕಿಯರಿಗೆ ಋತುಚಕ್ರದ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಿಶೀಲಿಸಲಾಗಿ, ಉಲ್ಲೇಖಿತ(2)ರ ಸರ್ಕಾರದ ಆದೇಶ ಸಂಖ್ಯೆ: ಆಇ 10 ಸೇನಿಸೇ 2025, ದಿನಾಂಕ: 02.12.2025ರಲ್ಲಿ, ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಿರುತ್ತದೆ. ಅದರಂತೆ ಎಲ್ಲ ಅರ್ಹ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿನ ಷರತ್ತಿಗೊಳಪಟ್ಟು ಮಂಜೂರು ಮಾಡಲು ನಿಯಮಾನುಸಾರ ಕ್ರಮವಹಿಸುವಂತೆ ತಿಳಿಸಲು ನಿರ್ದೇಶಿಸಲಾಗಿದೆ.









