ಕಲಬುರಗಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸಾಲ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು ಪ್ರಮಾಣಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ: ಈ ಯೋಜನೆಯಡಿ ಕನಿಷ್ಠ 50,000 ರೂ.ದಿಂದ ಗರಿಷ್ಠ 1,00,000 ರೂ. ಗಳ ಸಾಲ ಒದಗಿಸಲಾಗುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಅರಿವು ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ. ಕೋರ್ಸಿನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುತ್ತದೆ. ಈ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ 1,00,000 ರೂ.ಗಳÀ ಶೈಕ್ಷಣಿಕ ಸಾಲವನ್ನು ಮಂಜೂರು ಮಾಡಲಾಗುತ್ತದೆ. ಅರ್ಜಿದಾರರ ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಅರ್ಹ ಅಭ್ಯರ್ಥಿಗಳು ನಿಗಮದ kacdc.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2022ರ ಸೆಪ್ಟೆಂಬರ್ 11 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ಸಹಾಯವಾಣಿ ಸಂಖ್ಯೆ 9448451111 ಅಥವಾ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ