ಬೆಳಗಾವಿ: ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಿ ಕೊಡುವುದಾಗಿ, ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಈ ಮೂಲಕ ಆಟೋ, ಟ್ಯಾಕ್ಸಿ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಬೆಳಗಾವಿಯ ವಿಧಾನಸಭೆಯಲ್ಲಿ ದಾಸರಹಳ್ಳಿ ಶಾಸಕ ಮಂಜುನಾಥ್ ಪ್ರಶ್ನೆ ಉತ್ತರಿಸಿದಂತ ಅವರು, ರಾಜ್ಯದ ಎಲ್ಲಾ ಆಟೋ, ಟ್ಯಾಕ್ಸಿ ಚಾಲಕರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಗೆ ಅಳವಡಿಸುವಂತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಭರವಸೆ ನೀಡಿದರು. ಆಯುಷ್ಮಾರ್ ಭಾರತ ಯೋಚನೆಯಡಿಯಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಎಲ್ಲಾ ಆಶ್ಪತ್ರೆಯಲ್ಲಿ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದಾಗಿ ಭರವಸೆ ನೀಡಿದರು.
ರಾಜ್ಯ ಸರ್ಕಾರವು 2011-12 ನೇ ಸಾಲಿನಿಂದ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. 2016-17 ನೇ ಸಾಲಿನಲ್ಲಿ ಚಾಲಕರ ಜೊತೆಗೆ ನಿರ್ವಾಹಕರು ಮತ್ತು ಕ್ಲೀನರ್ಸ್ ಗಳಿಗೂ ಸಹ ವಿಸ್ತರಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆಟೋ ಚಾಲಕ ಮತ್ತು ಕ್ಯಾಬ್ ಚಾಲಕ ಒಳಗೊಂಡಂತೆ ಆರ್ಥಿಕವಾಗಿ ಹಿಂದುಳಿದ ವರ್ಗದ ಅರ್ಹರಿಗೆ ವಸತಿ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.