ಕೊಪ್ಪಳ : ಕೊಪ್ಪಳ ನಗರಸಭೆ ವತಿಯಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
Health Tips: ಹೃದ್ರೋಗಗಳನ್ನು ತಡೆಗಟ್ಟಲು ಈ ಅಡುಗೆ ಎಣ್ಣೆಗಳಲ್ಲಿದೆ ಪರಿಹಾರ…!
ನಗರಸಭೆಯ 2022-23ನೇ ಸಾಲಿನ ಶೇ.7.25 ರ ಯೋಜನೆಯಡಿ ಹಾಗೂ ನಗರಸಭೆ ಅನುದಾನದಡಿ ಶೇ.40 ರಷ್ಟು ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯಧನಕ್ಕಾಗಿ ಪ್ರೋತ್ಸಾಹಧನ ಒದಗಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು ಮತ್ತು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಿಕ್ಷಣ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 20 ರೊಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಅಪೂರ್ಣ ದಾಖಲಾತಿಗಳನ್ನು ಲಗತ್ತಿಸಿದ ಮತ್ತು ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆಗಸ್ಟ್ 6 ರಂದು ಶಿವಮೊಗ್ಗದಲ್ಲಿ `ಮಿನಿ ಉದ್ಯೋಗ ಮೇಳ’