ಬೆಂಗಳೂರು : ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಇದೀಗ ರಾಜ್ಯ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಒಟ್ಟು 5.85 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24 ನೇ ಸಾಲಿನಲ್ಲಿ ಅರ್ಜಿಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಸದರಿ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಬಿಡುಗಡೆಯಾದ ಅನುದಾನ ವಿವರ ಈ ಕೆಳಕಂಡಂತಿದೆ.
2023-24 ನೇ ಸಾಲಿಗೆ ಸ್ವೀಕರಿಸಲಾದ ಅರ್ಜಿಸಲ್ಲಿಸಿದ ಸಂಖ್ಯೆ ಒಟ್ಟು 4474 ಇದ್ದು, ಇದರಲ್ಲಿ ಶಿಷ್ಯವೇತನ ಪಾವತಿಸ ಬಹುದಾದ ಅರ್ಹ ಅರ್ಜಿಗಳ ಸಂಖ್ಯೆ3958 ಇದೆ. ಇನ್ನು ಮಾರ್ಚ್ 2024 ರ ಅಂತ್ಯಕ್ಕೆ ಶಿಷ್ಯವೇತನ ಬಿಡುಗಡೆ ಮಾಡಲಾದ ಅರ್ಜಿಗಳ ಸಂಖ್ಯೆ 1737 ಇದ್ದು, ಅನುದಾನದ ಒಟ್ಟು ಮೊತ್ತ 2.41 ಕೋಟಿ ರೂಪಾಯಿ ಬಿಡುಗಡೆ ಆಗಿದೆ.
ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಮತ್ತು ಮಂಡಳಿಯು ಖಜಾನೆ ಮುಖಾಂತರ ಶಿಷ್ಯವೇತನ ಬಿಡುಗಡೆ ಮಾಡಬೇಕಾದ ಹಿನ್ನಲೆಯಲ್ಲಿ ಸದರಿ ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ 2024 ರ ಮಾಹೆಯಲ್ಲಿ ಬಾಕಿ ಉಳಿದ ಅರ್ಜಿಗಳನ್ನು ಪರಿಗಣಿಸಿ ಪಾವತಿಸಲಾದ ಅರ್ಜಿಗಳ ಸಂಖ್ಯೆ ಹಾಗೂ ಬಿಡುಗಡೆ ಮಾಡಲಾದ ಒಟ್ಟು ಅನುದಾನದ ಮೊತ್ತ 3.44ಕೋಟಿ ರೂಪಾಯಿ ಬಿಡುಗಡೆ ಆಗಿದೆ.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯವೇತನ ಯೋಜನೆಯಡಿ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸುಮಾರು ₹5.85 ಕೋಟಿ ಶಿಷ್ಯವೇತನ ಬಿಡುಗಡೆಗೊಳಿಸಲಾಗಿದೆ. pic.twitter.com/WVMQBll82l
— Siddaramaiah (@siddaramaiah) January 2, 2025