ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಯರಿಗೆ ಮಾಸಿಕ ರೂ.2 ಸಾವಿರ ಸಂದಾಯವಾಗುತ್ತದೆ. ಆದರೆ ಕಳೆದ 2-3 ತಿಂಗಳವರೆಗೆ ಫಲಾನುಭವಿಗಳ ಖಾತೆಗೆ ಹಣ ಬಂದಿಲ್ಲ ಎಂದು ಯಜಮಾನಿಯರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ.
ಇದೀಗ ಗೃಹಲಕ್ಷ್ಮಿಯರಿಗೆ ಖುದ್ದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಹಿ ಸುದ್ದಿ ನೀಡಿದ್ದು, ಶೀಘ್ರವೇ ಹಣ ಸಂದಾಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕೂರ್ತು ಮಾತನಾಡಿ ಅವರು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಹಿಳೆಯರಿಗೆ ಕಳೆದ ಎರಡರಿಂದ ಮೂರು ತಿಂಗಳಿನಿಂದ ಗ್ರಹಲಕ್ಷ್ಮಿ ಹಣ ಬಂದಿಲ್ಲ ಎಂಬ ದೂರುಗಳು ಬಂದಿವೆ. ಶೀಘ್ರದಲ್ಲೇ ಅವರ ಖಾತೆಗೆ ಮೂರು ತಿಂಗಳ ಹಣ ಒಮ್ಮೆ ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.