ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ರಾಜ್ಯದ ಮಹಿಳಾ ಮಣಿಯರ ಖಾತೆಗೆ ಸರ್ಕಾರ ಪ್ರತಿ ತಿಂಗಳು ಬಂದ 2000 ರೂ. ಹಣವನ್ನು ಜಮಾ ಮಾಡುತ್ತಿದೆ. ಈ ಗೃಹ ಲಕ್ಷ್ಮಿ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಸದುಪಯೋಗ ಪಡಿಸಿಕೊಂಡಂತಹ ನಿರ್ದರ್ಶನಗಳು ನೋಡಿದ್ದೇವೆ. ಇದೀಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದು ಯಜಮಾನಿಯರ ಆರೋಪವಾಗಿತ್ತು.
ಈ ಕುರಿತಾಗಿ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೊಂದು ಅಪ್ಡೇಟ್ ನೀಡಿದ್ದು,ಫೆಬ್ರವರಿ ತಿಂಗಳ ಬಳ ಏಪ್ರಿಲ್ ಎರಡನೇ ವಾರದಂದು ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ರು. ಇದೀಗ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಜಮಾ ಆಗಲಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಜನವರಿ ತಿಂಗಳ ಗೃಹಲಕ್ಷ್ಮಿ ಹಣವನ್ನು ಕಳೆದ ಯುಗಾದಿ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿತ್ತು.ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಯಾವಾಗ ಜಮಾ ಆಗಲಿದೆ ಎಂದು ಮಹಿಳೆಯರು ಸರ್ಕಾರವನ್ನ ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಆದಷ್ಟು ಶೀಘ್ರದಲ್ಲಿ ಮಹಿಳೆಯವರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ ಎಂದು ತಿಳಿದು ಬಂದಿದೆ.