Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಗ್ರಾಮೀಣ ಭಾಗದ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಪರೀಕ್ಷಾ ಶುಲ್ಕ’ ಇಳಿಕೆ.!
KARNATAKA

GOOD NEWS : ರಾಜ್ಯದ ಗ್ರಾಮೀಣ ಭಾಗದ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಪರೀಕ್ಷಾ ಶುಲ್ಕ’ ಇಳಿಕೆ.!

By kannadanewsnow57

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವರಾದ ಡಾ.ಎಂಸಿ ಸುಧಾಕರ್ ಉತ್ತರ ನೀಡಿದರು.

2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ ನಿರತರಾಗುವ ಅಧಿಕಾರಿ, ಸಿಬ್ಬಂದಿಗೆ ಗೌರವಧನ ಭರಿಸುವುದು ಮುಂತಾದ ಎಲ್ಲಾ ವೆಚ್ಚಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ ಭರಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿನ ಪಾರದರ್ಶಕವಾಗಿ ನಡೆಸಲು ಆಧುನಿಕ ತಂತ್ರಜ್ಞಾನ ಬಳಕೆ ಮಾಡುವುದು ಅನಿವಾರ್ಯವಾಗಿದ್ದು, ಅರ್ಜಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದಲ್ಲಿ ಎಲ್ಲಾ ವೆಚ್ಚಗಳನ್ನು ನಿಭಾಯಿಸುವುದು ಕಷ್ಟಸಾಧ್ಯವಾಗುತ್ತಿದೆ. ಅಭ್ಯರ್ಥಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಿಲ್ಲದೆ ಪ್ರಾಧಿಕಾರವು ಪರೀಕ್ಷೆಯನ್ನು ನಡೆಸಲು ಕನಿಷ್ಠ ಮೊತ್ತವನ್ನು ನಿಗದಿಪಡಿಸಿದ್ದು, ಅಭ್ಯರ್ಥಿಗಳಿಂದ ನಿಗದಿಪಡಿಸಿರುವ ಶುಲ್ಕ ಪಡೆಯುವುದು ಅನಿವಾರ್ಯವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಯಾವುದೇ ಆರ್ಥಿಕ ಲಾಭ ಇರುವುದಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2022ನೇ ವರ್ಷದಿಂದ ಇಷ್ಟೇ ನಿಗದಿ ಶುಲ್ಕವನ್ನು ವಿಧಿಸುತ್ತಿದ್ದು, ಪರೀಕ್ಷೆ ನಡೆಸುವ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾದರೂ ಸಹ ಬಡ ಹಾಗೂ ಗ್ರಾಮೀಣ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಶುಲ್ಕವನ್ನು ಹೆಚ್ಚಿಸಿರುವುದಿಲ್ಲ ಹಾಗೂ ಆರ್ಥಿಕ ಹೊರ ತಪ್ಪಿಸಲು ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಮೊದಲ ಹುದ್ದೆಗೆ ಮಾತ್ರ ಅವರಿಗೆ ಅನ್ವಯಿಸುವ ಪೂರ್ಣ ಅರ್ಜಿ ಶುಲ್ಕ ಪಾವತಿಸಲು ಹಾಗೂ ಹೆಚ್ಚುವರಿ ಹುದ್ದೆಗೆ ಕೇವಲ ರೂ.100 ವಿಧಿಸಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗುತ್ತಿಲ್ಲ. ಆದ್ದರಿಂದ, ಕೇಂದ್ರ / ರಾಜ್ಯ ಲೋಕ ಸೇವಾ ಆಯೋಗದ ಮಾದರಿಯಲ್ಲಿ ಶುಲ್ಕ ವಿಧಿಸಲು ಸಾಧ್ಯವಾಗುವುದಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ.

2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು… pic.twitter.com/GFjplm7yIU

— DIPR Karnataka (@KarnatakaVarthe) December 8, 2025

GOOD NEWS: Good news for government job aspirants in the rural parts of the state: Government reduces the examination fee!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

2 Mins Read

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

2 Mins Read
Recent News

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಹರಡುತ್ತಿದೆ ಹಂತಾವೈರಸ್ ಭೀತಿ: ದೇಶಾದ್ಯಂತ ಹದ್ದಿನ ಕಣ್ಣಿಟ್ಟ ಭಾರತೀಯ ಆರೋಗ್ಯ ಸಂಸ್ಥೆಗಳು

State News
KARNATAKA

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

By kannadanewsnow09 KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ…

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

ಅಧಿಕಾರಿಗಳೇ ಎಚ್ಚರ, ಬಡವರ ಕೆಲಸದಲ್ಲಿ ವಿಳಂಬವಾದರೆ ಕ್ರಮ ಖಚಿತ: ಸಾಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಗುಡುಗು

BIG NEWS: ‘ಸಕಾಲ’ ಸೇವೆಗೆ ಸಚಿವ ಕೃಷ್ಣ ಬೈರೇಗೌಡ ‘ಡಿಜಿಟಲ್’ ಬಲ: ಲಂಚದ ಹಾವಳಿ ಮತ್ತು ವಿಳಂಬಕ್ಕೆ ಬ್ರೇಕ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.