ಶಿರಸಿ : ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Karnataka Weather Report : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಪದವಿ ಹಂತದಲ್ಲೇ `ಹಣಕಾಸು ಹೂಡಿಕೆ’ ಕಲಿಕೆ : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ
ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ.