ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ( Government Primary and High School ) ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರಾಗಿ ( Guest Teacher ) ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದ ತಾಲೂಕು ಪಂಚಾಯ್ತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕ ಹುದ್ದೆಗಳಿಗೆ ಎದುರಾಗಿ, ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ 17,505.23 ಲಕ್ಷಗಳನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಇನ್ನೂ ಬಿಡುಗಡೆಗೊಳಿಸಲಾದ ಅನುದಾನವನ್ನು ಪ್ರಸ್ತಾವಿತ ಉದ್ದೇಶಕ್ಕಾಗಿ ಆದ್ಯತೆಯ ಮೇಲೆ ವೆಚ್ಚ ಮಾಡಬೇಕು. ಯಾವುದೇ ಹಂತದಲ್ಲಿ ತಾಲೂಕು ಪಂಚಾಯ್ತಿ ಅಥವಾ ಅನುಷ್ಟಾನಾಧಿಕಾರಿಗಳ ಹಂತದಲ್ಲಿ ವಿಳಂಬವಾದಲ್ಲಿ ಆ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.