ಬೆಂಗಳೂರು : ವಸತಿ ರಹಿತ ಬಡಕುಟುಂಬಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಮುಂದಿನ ಮಾರ್ಚ್ ವೇಳೆಗೆ ಹೊಸದಾಗಿ 5 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ವಸತಿ ಇಲಾಖೆಯ ಸಭೆ ನಡೆಸಲಾಗಿದ್ದು, ಮುಂದಿನ ಮಾರ್ಚ್ ವೇಳೆಗೆ 5 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಯಡಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಅಗತ್ಯ ಇರುವ ಐದು ಸಾವಿರ ಕೋಟಿ ರೂ.ಅನ್ನು ನೀಡುವ ಆಶ್ವಾಸನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ ಎಂದು ಹೇಳಿದ್ದಾರೆ.