ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನೊಂದು ವಾರದಲ್ಲಿ ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬಾಕಿ ಉಳಿದಿರುವ ಮೇ ತಿಂಗಳ ಗೃಹಲಕ್ಷ್ಮಿ ಹಣವನ್ನು ಇನ್ನೊಂದು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಫಲಾನುಭವಿಗಳಿಗೆ ಹಣ ಪಾವತಿಯಾಗದಿದ್ದ ಸಂದರ್ಭದಲ್ಲಿ ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ NPCI Failure/ E-KYC Failure ಎಂದು ಬಂದ ಕೂಡಲೇ ಅಗತ್ಯ ದಾಖಲೆಗಳಾದ ರೇಷನ್ಕಾರ್ಡ್, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಮೊಬೈಲ್ ಹಾಗೂ ಬ್ಯಾಂಕ್ ಪಾಸ್ಪುಸ್ತಕ ಒಂದು ಅಥವಾ ಇತರೆ ಪಾಸ್ಪುಸ್ತಕ ಇದ್ದಲ್ಲಿ ತೆಗೆದುಕೊಂಡು ಬಂದು ಸರಿಪಡಿಸಿಕೊಳ್ಳಬಹುದು.