ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ವರ್ಷ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ 1,600 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಒಂದು ವರ್ಷದ ತರಬೇತಿ ನಂತರ ಸೇವೆಗೆ ಲಭ್ಯವಾಗಲಿದ್ದಾರೆ. ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಅಗ್ನಿ, ಅವಘಡದಂತಹ ಪರಿಸ್ಥಿತಿ ಎದುರಿಸಲು ಆರು ತಿಂಗಳ ಕಾಲ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಮಳೆ ನೀರಿನಿಂದ ಅವೃತಗೊಂಡ ವಸತಿ ಪ್ರದೇಶಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಹಾಗೂ ಅಗ್ನಿ ಶಾಮಕ ಹಾಗೂ ತುರ್ತು ಸೇವೆ ಇಲಾಖೆ ಸಿಬ್ಬಂದಿ ಕಾರ್ಯವನ್ನು ವೀಕ್ಷಿಸಿ ಶ್ಲಾಘೀಸಿದರು.