ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಗ್ರಾಮಪಂಚಾಯಿತಿಗಳಿಗೆ ಸರ್ಕಾರದ 30 ಕ್ಕೂ ಹೆಚ್ಚು ಇಲಾಖೆಗಳ ಕಾರ್ಯಕ್ರಮ, ಯೋಜನೆಗಳನ್ನು ಜಾರಿ ಮಾಡುವ ಜವಾಬ್ದಾರಿಗಳನ್ನು ನೀಡಲಾಗಿದೆ. ಹೀಗಾಗಿ ಕೆಲಸದ ಒತ್ತಡ ಕಡಿಮೆ ಮಾಡಲು 3-4 ತಿಂಗಳಲ್ಲಿ ಪಿಡಿಒ ಸೇರಿದಂತೆ ವಿವಿಧ ಹುದ್ದೆಗಳನ್ನು ನೇರ ಇಲ್ಲವೇ ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
BREAKING NEWS: CUET-UG ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಹೀಗೆ ಮಾಡಿ! | NTA declares CUET UG 2022 results
ಗ್ರಾಮಪಂಚಾಯಿತಿಗಳಲ್ಲಿ ಖಾಲಿ ಇರುವ 326 ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕಾರ್ಯದರ್ಶಿ ಗ್ರೇಡ್-1 ಹುದ್ದೆಗಳು ನೇರ ನೇಮಕದ ಮೂಲಕ ಹಾಗೂ ಕಾರ್ಯದರ್ಶಿ ಗ್ರೇಡ್ -2 ರಲ್ಲಿ ಖಾಲಿ ಇರುವ 675 ಹುದ್ದೆಗಳ ಪೈಕಿ 124 ಅನ್ನು ನೇರ ನೇಮಕಾತಿ ಹಾಗೂ ಉಳಿದವುಗಳನ್ನು ಬಡ್ತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.