ಬೆಂಗಳೂರು : ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕೋಟಾ ಸೀಟುಗಳ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಬ್ರೇಕ್ ಹಾಕಿದೆ.
BIGG NEWS : ಕೇಂದ್ರೀಯ ಶಿಕ್ಷಣ ಸಂಸ್ಥೆಗಳು, ನೇಮಕಾತಿ ಪರೀಕ್ಷೆಗೆ ಹಿಂದಿ ಕಡ್ಡಾಯ : ಅಮಿತ್ ಶಾ ಸಮಿತಿ ಶಿಫಾರಸು
ರಾಜ್ಯದ ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕೋಟಾ ಸೀಟುಗಳ ಶುಲ್ಕ ಶೇ. 10ರಷ್ಟು ಹೆಚ್ಚಳವಾಗಲಿದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಶುಲ್ಕ ಹೆಚ್ಚಳಕ್ಕೆ ನಿರಾಕರಿಸಿದ್ದಾರೆ. ಕಳೆದ ವರ್ಷದ ಶುಲ್ಕವೇ ಮುಂದುವರೆಯಲಿದೆ.
ರಾಜ್ಯದ 8 ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಭಾಷಾ ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಖಾಸಗಿ ಕೋಟಾ ಸೀಟುಗಳ ಶುಲ್ಕವನ್ನು ಮಾತ್ರ ಶೇ. 10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿದ್ದು, ಉಳಿದಂತೆ ಈ ಕಾಲೇಜುಗಳ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ಹೆಚ್ಚಳವಾಗುವುದಿಲ್ಲ.
BIGG NEWS : ಹಾವೇರಿಯಲ್ಲಿ 86 `ಅಖಿಲ ಭಾರತ ಕನ್ನಡ ಸಾಹಿತ್ಯ’ ಮತ್ತೆ ಮುಂದೂಡಿಕೆ!