ಪಾವಗಡ : ಹಾಲು ಉತ್ಪಾದಕರಿಗೆ ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಸಿಹಿಸುದ್ದಿ ನೀಡಿದದು, ಹಾಲು ಉತ್ಪಾದಕ ರೈತರಿಗೆ ಪ್ರತಿ ಲೀಟರ್ ಹಾಲಿಗೆ 2 ರೂ. ಪ್ರೋತ್ಸಾಹಧನ ನೀಡಲಾಗುವುದು ಎಮದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಹಾಲು ಉತ್ಪಾದಕ ರೈತರಿಗೆ 11 ರಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚಳವಾಗಿ 2 ರೂ. ಪ್ರೋತ್ಸಾಹಧನ ನೀಡಲಾಗುವುದು. ಮುಂದಿನ ದಿನಗಳಲ್ಲಿ ತಾಲೂಕಿನಾದ್ಯಂತ ಹೆಚ್ಚು ಡೇರಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ರೈತರು ಖಾಸಗಿ ಡೇರಿಗಳಿಗೆ ಹಾಲು ನೀಡದೇ ಸರ್ಕಾರದಿ ಡೇರಿಗಳಿಗೆ ಹಾಕಿದಾಗ ಪ್ರೋತ್ಸಾಹಧನ, ಹಸುಗಳಿಗೆ ವಿಮೆ ಸೇರಿ ವಿವಿಧ ಸೌಲತ್ತುಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.