ಬೆಂಗಳೂರು : ಜನೆವರಿ ಹಾಗು ಫೆಬ್ರವರಿ ಕಂತಿನ ಗೃಹಲಕ್ಷ್ಮಿ ಹಣಕ್ಕಾಗಿ ರಾಜ್ಯದ ಯಜಮಾನಿಯರು ಕಾಯುತ್ತಿದ್ದು, ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, 17ನೇ ಕಂತಿನ 2 ತಿಂಗಳ ಒಟ್ಟು ಹಣ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಯುಗಾದಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಯಾಗಲಿದೆ ಅಂತ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಆದ್ರೆ ಏಪ್ರಿಲ್ ಮೊದಲ ವಾರದಲ್ಲಿ ಹಣ ಮಹಿಳೆಯರಿಗೆ ತಲುಪುವ ನಿರೀಕ್ಷೆ ಇದೆ. ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.
ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನಿಂದ ಮಹಿಳೆಯರು ಖುಷ್ ಆಗಿದ್ದಾರೆ.