ಬೆಂಗಳೂರು : ರಾಜ್ಯ ಸರ್ಕಾರವು ಭತ್ತ ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಭತ್ತ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
BIGG NEWS: ಕೋಲಾರದಲ್ಲಿ ಭಾರಿ ಗಾಳಿ ಸಮೇತ ವರುಣನ ಆರ್ಭಟ; ಮಳೆಗೆ ಧರೆಗುರುಳಿದ ಮರಗಳು
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1 ರಿಂದ ಮಾರ್ಚ್ 31 ರವರೆಗೆ ಭತ್ತ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಖರೀದಿಸಲಿದೆ.
ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ಎ ಗ್ರೇಡ್ ಭತ್ತಕ್ಕೆ 2060 ರೂ. ನಿಗದಿಪಡಿಸಲಾಗಿದೆ. ಒಟ್ಟು 5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.