ಬೆಂಗಳೂರು : ಗರ್ಭಿಣಿ ಮತ್ತು ಬಾಣಂತಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆ ಬಾಗಿಲಿಗೇ ಒದಗಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
BREAKING NEWS: ಬೆಳ್ಳಂಬೆಳಗ್ಗೆ ಲಡಾಖ್ನ ಲೇಹ್ನಲ್ಲಿ 4.8 ತೀವ್ರತೆಯ ಭೂಕಂಪ | Earthquake in Leh
ಈ ಕುರಿತು ಮಾಹಿತಿ ನೀಡಿರುವ ಸಚಿವ ಹಾಲಪ್ಪ ಆಚಾರ್, ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಈ ವರ್ಷ ಮಳೆಗಾಲ ಮುಗಿಯುವವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಫಲಾನುಭವಿಗಳ ಮನವಿ ಮೇರೆಗೆ ಮನೆಗೆ ಕಚ್ಚಾ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
BIG BREAKING NEWS: ಲಕ್ನೋದಲ್ಲಿ ಭಾರೀ ಮಳೆಗೆ ಗೋಡೆ ಕುಸಿದು 10 ಮಂದಿ ಸಾವು | Lucknow wall collapses
ಮಾತೃಪೂರ್ಣ ಯೋಜನೆಯಡಿ 8 ತಿಂಗಳು ತುಂಬಿದ ಗರ್ಭಿಣಿಯರಿಗೆ ಹಾಗೂ ಹೆರಿಗೆಯಾದ 45 ದಿನಗಳವರೆಗೆ ಬಾಣಂತಿಯರಿಗೆ ಬಿಸಿಯೂಟವನ್ನು ಮನೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ.