ಬೆಂಗಳೂರು : ಗರ್ಭಿಣಿ ಮತ್ತು ಬಾಣಂತಿಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆ ಬಾಗಿಲಿಗೇ ಒದಗಿಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಕರೆ ಮಾಡಿದರೂ ಬಾರದ ಆಂಬ್ಯುಲೆನ್ಸ್… ಗಾಯಾಳುವನ್ನು JCBಯಲ್ಲೇ ಆಸ್ಪತ್ರೆಗೆ ಕರೆದೊಯ್ದ ಸ್ಥಳೀಯರು… ವಿಡಿಯೋ ವೈರಲ್
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಹಾಲಪ್ಪ ಆಚಾರ್, ಗರ್ಭಿಣಿ ಮತ್ತು ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಠಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಈ ವರ್ಷ ಮಳೆಗಾಲ ಮುಗಿಯುವವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಫಲಾನುಭವಿಗಳ ಮನವಿ ಮೇರೆಗೆ ಮನೆಗೆ ಕಚ್ಚಾ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
ಮಾತೃಪೂರ್ಣ ಯೋಜನೆಯಡಿ 8 ತಿಂಗಳು ತುಂಬಿದ ಗರ್ಭಿಣಿಯರಿಗೆ ಹಾಗೂ ಹೆರಿಗೆಯಾದ 45 ದಿನಗಳವರೆಗೆ ಬಾಣಂತಿಯರಿಗೆ ಬಿಸಿಯೂಟವನ್ನು ಮನೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ.