ಬೆಂಗಳೂರು : ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಬಡ್ತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹೌದು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪದವಿ ಮತ್ತು TET Certification ಶಾಲಾ ಶಿಕ್ಷಕರುಗಳಿಗೆ ಸಂಚಿತ ಪರಿಣಾಮ ಹೊಂದಿಲ್ಲದಂತೆ ಒಂದು ಬಾರಿಯ ವೇತನ ಬಡ್ತಿಯನ್ನು ನೀಡಲು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅವಕಾಶ ನೀಡಲು ಮತ್ತು ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಹೀಗಿವೆ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು
ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ.
ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.