ಬೆಂಗಳೂರು : ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಮಾಜ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 1 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿರಿಧಾನ್ಯ ಆಹಾರ ವಿತರಿಸಲು ಸಜ್ಜಾಗಿದೆ.
ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಸುಧಾರಿಸುವ ಉದ್ದೇಶವನ್ನು ಹೊಂದಿರುವ ಈ ಕ್ರಮವನ್ನು ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರು ತಿಂಗಳ ಅವಧಿಗೆ ಜಾರಿಗೆ ತರಲಾಗುವುದು. ಉತ್ತರ ಕನ್ನಡದ ಸುಮಾರು 8,500 ವಿದ್ಯಾರ್ಥಿಗಳು ಮತ್ತು ಹಾವೇರಿ ಜಿಲ್ಲೆಯ 13,500 ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Big news: ಕೇರಳದ ಗುರುವಾಯೂರ್ ದೇವಸ್ಥಾನದಲ್ಲಿ ಒಂದೇ ದಿನ ನಡೀತು 232 ಮದುವೆ!
ಆರು ತಿಂಗಳ ನಂತರ ಮಕ್ಕಳಲ್ಲಿ ಪೌಷ್ಠಿಕಾಂಶದ ಸುಧಾರಣೆಯನ್ನು ಖಚಿತಪಡಿಸಿಕೊಳ್ಳಲು ಇಲಾಖೆ ಅಧ್ಯಯನವನ್ನು ನಡೆಸುತ್ತದೆ. ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಒಂದು ಕಿಲೋಗ್ರಾಂ ಸಿರಿಧಾನ್ಯಗಳನ್ನು ಹಂಚಿಕೆ ಮಾಡಲಾಗುತ್ತದೆ. ವಿವಿಧ ರೀತಿಯ ಆಹಾರಗಳನ್ನು ತಯಾರಿಸಲು ನಾಲ್ಕು ರೀತಿಯ ಸಿರಿಧಾನ್ಯಗಳನ್ನು ಬಳಸಲಾಗುತ್ತದೆ. ಈ ಉಪಕ್ರಮಕ್ಕಾಗಿ 1.40 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುವುದು. ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಇಲಾಖೆ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.