ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಜನರಿಗೆ ಮೀಸಲಾತಿ ಹೆಚ್ಚಿಸುವ ಕ್ರಾಂತಿಕಾರಿ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
BIGG NEWS : ಕ್ರೀಡಾ ಸಾಧಕರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : ಸಾಧಕ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ಹಾಗೂ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿ ನಂತರ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ಜನರಿಗೆ ಮೀಸಲಾತಿ ಹೆಚ್ಚಿಸುವ ಕ್ರಾಂತಿಕಾರಿ ನಿರ್ಧಾರ ಮಾಡಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲಿ ಕೂಡ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಶಿಕ್ಷಣಕ್ಕೆ ಒಟ್ಟು ನೂರು ಅಂಬೇಡ್ಕರ್ ಹಾಸ್ಟೆಲ್, 55 ಕನಕದಾಸ ಹಾಸ್ಟೆಲ್ ಹಾಗೂ 5 ದೀನ್ ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಮೈಸೂರು, ಧಾರವಾಡ, ಮಂಗಳೂರು, ಬೆಂಗಳೂರು, ಕಲಬುರಗಿಯಲ್ಲಿ ಮೆಗಾ ಹಾಸ್ಟೆಲ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.
ಇದೇ ವೇಳೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಸಂಪೂರ್ಣವಾಗಿ ಈಡೇರಿಸಲು ಆಡಳಿತ, ಆಡಳಿತ ವರ್ಗ, ಸಮಾಜ ಸೇರಿದಂತೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಬೊಮ್ಮಾಯಿ ಹೇಳಿದರು.