ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : ರಾಜ್ಯದ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳ ದಾಖಲಾತಿ ದಿನಾಂಕ ವಿಸ್ತರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ
ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾಡಳಿತ ಭವನ, ಹರಿಹರ ರಸ್ತೆ ಅಥವಾ ದೂ.ಸಂ 08192-26354 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
BIGG NEWS : ಬಿಜೆಪಿ ಮುಖಂಡ `ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣ `NIA’ಗೆ ಹಸ್ತಾಂತರ : ಸಿಎಂ ಬೊಮ್ಮಾಯಿ