ಆಲಮಟ್ಟಿ : ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದ ಕಾರ್ಪೋರೇಟ್ ಆಸ್ಪತ್ರೆ ಸೇರಿ ಯಾವುದೇ ಆಸ್ಪತ್ರೆಯಲ್ಲಿ ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಯೋಜನೆ ಶೀಘ್ರವೇ ಆರಂಭಗೊಳ್ಳಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಯೋಜನೆ ಆರಂಭಗೊಳ್ಳಲಿದೆ. ನೂತನ ಯೋಜನೆಯಿಂದ 6 ಲಕ್ಷ ನೌಕರರ ಕುಟುಂಬದವರಿಗೆ ಆರೋಗ್ಯ ಭಾಗ್ಯ ಸಿಗಲಿದೆ ಎಂದರು.
BIGG NEWS : ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ
ಈ ಯೋಜನೆಯನ್ನು ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಇದು ಜಾರಿಯಾದರೆ ದೇಶದಲ್ಲೇ ವಿನೂತನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.