ಕಲಬುರಗಿ : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
BIGG NEWS : ಡಿ.ಕೆ. ಶಿವಕುಮಾರ್ ಬಹಳ ವರ್ಷಗಳಿಂದ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಮಾತನಾಡಿದ್ದು, ಅವರು ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಸಾರಿಗೆ ಇಲಾಖೆಯಲ್ಲಿ 635 ಹುದ್ದೆಗಳ ಪೈಕಿ 165 ಜನ ಮಾತ್ರ ಕಾರ್ಯನಿರ್ವಹಿಸುತ್ತಿದ್ದುಉ, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿನ ಸಾರಿಗೆ ವ್ಯವಸ್ಥೆ ಉತ್ತಮಪಡಿಸಲು ಎಲೆಕ್ಟ್ರಿಕ್ ಬಸ್ ಸೇರಿ 1,500 ಕ್ಕೂ ಹೆಚ್ಚು ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
BIGG NEWS : ʻ ನನಗೂ ಆಶೀರ್ವಾದ ಮಾಡಿ ʼ ರಾಮನಗರದಲ್ಲೂ ʼ ಸಿಎಂ ಆಗುವ ಬಯಕೆ ʼ ವ್ಯಕ್ತಪಡಿಸಿದ ಡಿಕೆಶಿ