ಬೆಂಗಳೂರು : ರಾಜ್ಯ ಸರ್ಕಾರದಿಂದ ಬೀದಿಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ ನೀಡಿದ್ದು, ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಬಿಬಿಎಂಪಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಸುಮಾರು 10 ಸಾವಿರ ತಳ್ಳುವ ಗಾಡಿಗಳನ್ನು ನೀಡಲಾಗುವುದು. ಇವು ಆಟೋ, ಬೈಸಿಕಲ್, ಬೈಕ್ ಹಾಗೂ ಸಾಂಪ್ರದಾಯಿಕ ತಳ್ಳುವ ಗಾಡಿ ಮಾದರಿಯಲ್ಲಿ ಇರಲಿವೆ. ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳುವ ಕಾಲಮಿತಿಯನ್ನು ಏಪ್ರಿಲ್ ಕೊನೆವರೆಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಇದುವರೆಗೂ ಪಾಲಿಕೆಯಿಂದ 27,565 ಬೀದಿಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದು ನೋಂದಣಿ ಮಾಡಿಕೊಂಡವರಿಗೆ ಸಹಾಯಧನ ನೀಡಿ ತಳ್ಳುವ ಗಾಡಿಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.