ಬೆಳಗಾವಿ : ಬೀದಿಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ನೀಡುವ ವಿಧೇಯಕಕ್ಕೆ ವಿಧಾನಪರಿಷತ್ ನಲ್ಲೂ ಅನುಮೋದನೆ ಸಿಕ್ಕಿದೆ.
ಕಂದಾಯ ಸಚಿವ ಆರ್. ಅಶೋಕ್ ಅವರು ಮಂಗಳವಾರ ವಿಧಾನಪರಿಷತ್ ನಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಸಾಲ ಪಡೆಯುವ ಬೀದಿ ಬದಿ ವ್ಯಾಪಾರಿಗಳು ಬರೆದುಕೊಡುವ ಸಾಲ ಕರಾರು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕಕ್ಕೆ ವಿನಾಯಿತಿ ನೀಡುವ ಮಸೂದೆ ಕರ್ನಾಟಕ ಸ್ಟಾಂಪ್ 4 ನೇ ತಿದ್ದುಪಡಿ ವಿಧೇಯಕ 2022 ಅನ್ನು ಮಂಡಿಸಿದ್ದಾರೆ. ಈ ತಿದ್ದುಪಡಿ ವಿಧೇಯಕಕ್ಕೆ ಧ್ವನಿ ಮತದ ಮೂಲಕ ಒಪ್ಪಿಗೆ ಸಿಕ್ಕಿದೆ.