ಚಿಕ್ಕಬಳ್ಳಾಪುರ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಮತ್ತು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಆನ್ ಲೈನ್ www.tw.kar.nic.in ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದೆ.
ಕೋರ್ಸುಗಳ ವಿವರ & ಪ್ರೋತ್ಸಾಹಧನ
ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮೊ-20,000/-, ಪದವಿ-25,000/- ಯಾವುದೇ ಸ್ನಾತಕೋತ್ತರ ಪದವಿ, (M.A, M.Sc, M.Com, MBA, MCA, MFA etc)-30,000/- ಕೃಷಿ, ಇಂಜಿನಿಯರಿಂಗ್, ವೆಟ್ರೆನರಿ, ಮೆಡಿಸಿನ್-35,000/- ರೂಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು.
ಅಗತ್ಯ ದಾಖಲೆಗಳು: ಸ್ವೀಕೃತ ಅರ್ಜಿ ಮತ್ತು ಮೂಲ ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳು, ವಿದ್ಯಾರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ, ಗುಡಿಬಂಡೆ, ಶಿಡ್ಲಘಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ಗೌರಿಬಿದನೂರು ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ: 08156-277117 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.