ಬೆಂಗಳೂರು : ರಾಜ್ಯದ ಕಬ್ಬು ( Sugar Cane) ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ರೈತರಿಗೆ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.
ಹೌದು, ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ.
ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಇಂದೇ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದಾರೆ.