ಬೆಂಗಳೂರು : ಶಿಕ್ಷಕ ಹುದ್ದೆ ಆಕ್ಷಾಂಕ್ಷಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, 2023 ರ ಫೆಬ್ರವರಿಯಲ್ಲಿ ನಿಗದಿಯಂತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿ : ಇಂದಿನ ಬ್ಯಾಂಕ್ ನೌಕರರ ಮುಷ್ಕರ ರದ್ದು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದದೆಗಳ (6 ರಿಂದ 8 ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದಾರೆ. ಒಟ್ಟು 15 ಸಾವಿರ ಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉಳಿದ 1,637 ಹುದ್ದೆಗಳಿಗೆ ಯಾವುದೇ ಅಭ್ಯರ್ಥಿಗಳು ಆಯ್ಕೆಯಾಗದ ಕಾರಣ ಆ ಹುದ್ದೆಗಳು ಖಾಲಿ ಉಳಿದಂತಾಗಿದೆ. ಇದೇ ಮೊದಲ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ 15 ಸಾವಿರ ಶಿಕ್ಷಕರ ನೇಮಕಾತಿ ಬಳಿಕ ಖಾಲಿ ಇರುವ ಹುದ್ದೆಗಳ ಭರ್ತಿ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023 ರ ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.