ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
Rain In Karnataka : ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ : ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಹೊಸದುರ್ಗ ತಾಲೂಕಿನ ದೇವಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ಫೆಬ್ರವರಿಯಲ್ಲೊಇ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಈ ವರ್ಷವೂ 100 ಪದವಿ ಪೂರ್ವ ಕಾಲೇಜು ಹಾಗೂ 100 ಪ್ರೌಢಶಾಲೆಗಳನ್ನು ಕೊಟ್ಟಿದ್ದೇವೆ. ಎಲ್ಲಿ ಶಾಲೆ ಹಾಗೂ ಕಾಲೇಜು ಅವಶ್ಯಕತೆ ಇದೆಯೋ ಅಲ್ಲಿ ನೂತನವಾಗಿ ಆರಂಭವಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
BREAKING NEWS : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು