ರಾಯಚೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 32 ಸಾವಿರ ಅತಿಥಿ ಶಿಕ್ಷಕರ ನೇಮಕದ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಉತ್ತರಾಖಂಡ: ಸ್ನಾನಕ್ಕೆಂದು ಹೋಗಿದ್ದ ಸೇನಾ ಯೋಧ ಗಂಗಾ ನದಿಯಲ್ಲಿ ಮುಳುಗಿ ಸಾವು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕದ ಬಗ್ಗೆ ಚಿಂತನೆ ನಡೆದಿದೆ. ಅದರಲ್ಲಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೇಮಕ ಮಾಡಲು ನಿರ್ಧರಿಸಲಾಗಿದೆ. 32 ಸಾವಿರ ಅತಿಥಿ ಶಿಕ್ಷಕರ ನೇಮಕದ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಈಗಾಗಲೇ ಶೇ. 92 ರಷ್ಟು ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗಿದ್ದು, ಉಳಿದ ವಿದ್ಯಾರ್ಥಿಗಳಿಗೆ ಶೀಘ್ರವೇ ಪಠ್ಯಪುಸ್ತಕ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.