ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.
ಈ ಕುರಿತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದು, “ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ” ಎಂದಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ.@BSBommai @BJP4Karnataka #ಜನಸ್ಪಂದನ #Janaspandana
— B.C Nagesh (@BCNagesh_bjp) September 10, 2022