ಬೆಂಗಳೂರು : ರಾಜ್ಯಾದ್ಯಂತ 13000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಡಿಸೆಂಬರ್7 ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 4,780 ಶಿಕ್ಷಕರನ್ನು ನೇಮಕಾತಿ ಮಾಡಿದ್ದರು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಪ್ರಥಮ ವರ್ಷದಲ್ಲಿ 13000 ಶಿಕ್ಷಕರನ್ನು ನೇಮಕ ಮಾಡಿದ್ದೆ. ಈಗ ಮತ್ತೆ 13000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದೇನೆ.
ಕಳೆದ ಎರಡೂವರೆ ವರ್ಷದಲ್ಲಿ 26000 ಹೊರಡಿಸಿದೆ ಶಿಕ್ಷಕರ ನೇಮಕಾತಿ ಮಾಡಿದಂತಾಗುತ್ತದೆ ಎಂದು ಹೇಳಿದರು. ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು.