ಶಿವಮೊಗ್ಗ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 11 ಸಾವಿರ ಶಿಕ್ಷಕರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 17 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಶಾಲೆಗಳಿಗೆ ಸುಮಾರು 11 ಸಾವಿರ ಹಾಗೂ ಅನುದಾನಿತ ಶಾಲೆಗಳಿಗೆ 6,500 ಸೇರಿದಂತೆ ಸುಮಾರು 17 ಸಾವಿರ ಶಿಕ್ಷಕರ ಶೀಘ್ರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದ ಇತರೆಡೆ ಅನುದಾನಿತ ಶಿಕ್ಷಕರು 7 ಸಾವಿರ ಸೇರಿದಂತೆ ಸುಮಾರು 17ರಿಂದ 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದರು.ಅಲ್ಲದೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಸುಧಾರಣೆಗಾಗಿ ಒಂದಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.