ಬಳ್ಳಾರಿ : ಟೆಕ್ಸ್ ಟೈಲ್ಸ್ ಕಾರ್ಮಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಟೆಕ್ಸ್ ಟೈಲ್ಸ್ ಕಾರ್ಮಿಕರಿಗೆ ಉಚಿತವಾಗಿ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಳಿ ಉದ್ಯಮಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ನೀಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕಟ್ಟಡ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ನೀಡುವ ಯೋಚನೆ ಇದೆ ಎಂದು ಹೇಳಿದ್ದಾರೆ.
BIGG NEWS : ಎಲ್ಲ ಶಾಲೆ-ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ : ಸಿಎಂ ಬೊಮ್ಮಾಯಿ