ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
BREAKING NEWS: ಬಿಹಾರದಲ್ಲಿ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಪತ್ತೆ; ಮಾಜಿ ಪೊಲೀಸ್ ಸೇರಿ ಇಬ್ಬರ ಬಂಧನ
ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ವಿಧಾನಸೌಧದಲ್ಲಿ ವಿಶೇಷ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ, ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್, ಆಹಾರ ಇಲಾಖೆ ಎಂಡಿ ಸೋಮಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
BIGG NEWS: ಬುಡಕಟ್ಟು ಜನಾಂಗದ ಹತ್ಯೆ ಆರೋಪ: ಸುಪ್ರೀಂಕೋರ್ಟ್ ನಲ್ಲಿ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
ಕರಾವಳಿ ಜಿಲ್ಲೆಗಳಿಗೆ ವರ್ಷಕ್ಕೆ 12 ಲಕ್ಷ ಕ್ವಿಂಟಾಲ್ ಕುಚ್ಚಲಕ್ಕಿ ಅಗತ್ಯವಿದೆ. ಇದಕ್ಕಾಗಿ ಕನಿಷ್ಟ 18 ಲಕ್ಷ ಕ್ವಿಂಟಾಲ್ ಭತ್ತದ ಅವಶ್ಯಕತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 2.5 ಲಕ್ಷ ಭತ್ತ ಉತ್ಪಾದನೆ ಆಗುತ್ತದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಗಳಿಂದ ಖರೀದಿ ಮಾಡಲಾಗುವುದು. ಕೇರಳ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭತ್ತ ಖರೀದಿಸುವ ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ಈ ವಾರ ತೆಲಂಗಾಣಕ್ಕೆ ಅಧ್ಯಯನ ತಂಡ ಭೇಟಿ ನೀಡಲಿದೆ. ಈಗಾಗಲೇ ಕೇರಳಕ್ಕೆ ಅಧ್ಯಯನ ತಂಡ ಭೇಟಿ ನೀಡಿದೆ. ಅಧ್ಯಯನ ತಂಡ ವರದಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.