Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದಿನ ಸಂಸತ್ ಅಧಿವೇಶನದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ನಿರ್ಣಯ | Impeachment motion

04/06/2025 7:29 AM

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM

ಭಾರತ ಮತ್ತೆ 7 ಗುರಿಗಳನ್ನು ಹೊಡೆದುರುಳಿಸಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ | Operation Sindoor

04/06/2025 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಮನೆ ಬಾಗಿಲಲ್ಲೇ ಆರೋಗ್ಯ ಪರೀಕ್ಷೆ ಇನ್ನು ರಾಜ್ಯವ್ಯಾಪಿ.!
KARNATAKA

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ಮನೆ ಬಾಗಿಲಲ್ಲೇ ಆರೋಗ್ಯ ಪರೀಕ್ಷೆ ಇನ್ನು ರಾಜ್ಯವ್ಯಾಪಿ.!

By kannadanewsnow5703/06/2025 5:51 AM

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಸಚಿವರು ಮಾತನಾಡುತ್ತಿದ್ದರು. ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಕಾರ್ಯ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.

ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನ ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನ ತರಲಾಗಿದೆ. ಆಶಾ ಕಾರ್ಯಕರ್ತರಯರಿಂದ ಹಿಡಿದು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಿ, ಸ್ಪಷ್ಟ ಮಾಹಿತಿಯುಳ್ಳ ಕೈಪಿಡಿ ನೀಡಿದ್ದೇವೆ. ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ ಕೂಡ ನಡೆಯಬೇಕು. ಆ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಯಾರು ಏನು ಮಾಡಬೇಕು ಎಂಬ ಸ್ಪಷ್ಟ ಚಿತ್ರಣವನ್ನ ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗಿದೆ.

ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ವಯಸ್ಸಿನ ವ್ಯಕ್ತಿಗಳಿಗೆ ಉಚಿತವಾಗಿ ಪ್ರಮುಖ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ರಕ್ತದೊತ್ತಡ, ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ NCD ಪೊರ್ಟಲ್ ನಲ್ಲಿ ಡೇಟಾ ನಮೂದಿಸಲಿದ್ದು, ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನ ಗೃಹ ಆರೋಗ್ಯ ಯೋಜನೆಯಲ್ಲಿ ಕಲ್ಪಿಸಲಾಗಿದೆ. ಪ್ರತಿ ಜಿಲ್ಲೆಗಳ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಗೃಹ ಆರೋಗ್ಯ ತರಬೇತಿ ಕಾರ್ಯಾಗಾರಗಳನ್ನ ಹಮ್ಮಿಕೊಳ್ಳಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

14 ಅಸಾಂಕ್ರಾಮಿಕ ರೋಗಗಳ ಉಚಿತ ತಪಾಸಣೆ ಮತ್ತು ಔಷಧ ವಿತರಣೆ

* ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ ಅಲೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ (19-29 ವರ್ಷ ವಯಸ್ಸಿನವರಿಗೆ) ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAM) ಉಚಿತವಾಗಿ ನಡೆಸಲಾಗುವುದು.

* ರೋಗನಿರ್ಣಯವಾದ ನಂತರ, ವ್ಯಕ್ತಿಗಳು ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಪಡೆಯಬಹುದು.‌

ಗೃಹ ಆರೋಗ್ಯ ಯೋಜನೆಯ ಉದ್ದೇಶಗಳು

* ಅಸಾಂಕ್ರಾಮಿಕ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಮತ್ತು ಜಾಗೃತಿ ಹೆಚ್ಚಿಸುವುದು.
* ಸಕಾಲದಲ್ಲಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಗಾಗಿ * * * ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.
* ವಿಕೇಂದ್ರೀಕೃತ ಆರೋಗ್ಯ ಸೇವೆಗಳ ಮೂಲಕ ನಿರಂತರ ಆರೈಕೆಯನ್ನು ಖಚಿತಪಡಿಸುವುದು.

ಆರೋಗ್ಯ ಸಿಬ್ಬಂದಿಯ ಪಾತ್ರ

* ಆಶಾ ಕಾರ್ಯಕರ್ತೆಯರು: ಮನೆ-ಮನೆಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು
* ಜಾಗೃತಿ ಮೂಡಿಸಿ, ಆರೋಗ್ಯ ತಪಾಸಣೆಗಾಗಿ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕಳುಹಿಸುವುದು.
* CHO ಗಳು/ PHCO ಗಳು: ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ (AAM) ಆರೋಗ್ಯ ತಪಾಸಣೆ ನಡೆಸಿ, NCD ಪೋರ್ಟಲ್‌ಗೆ ಡೇಟಾವನ್ನು ನಮೂದಿಸುತ್ತಾರೆ. ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗಳಿಗೆ ಕಳುಹಿಸಬಹುದು.
* ವೈದ್ಯಕೀಯ ಅಧಿಕಾರಿಗಳು: ರೋಗನಿರ್ಣಯ, ಚಿಕಿತ್ಸೆ ಮತ್ತು ದೀರ್ಘಕಾಲೀನ ನಿರ್ವಹಣೆಯನ್ನು ಸೇವೆಗಳನ್ನು
ಒದಗಿಸಲಾಗುವುದು.

ಜಮೀನಿಗೆ ಅರಣ್ಯ ರಸ್ತೆ ಬಳಸಲು ಇಂಧನ ಸಚಿವ ಕೆಜೆ ಜಾರ್ಜ್ ಪುತ್ರ ‘ರಾಣಾ ಜಾರ್ಜ್’ಗೆ ಹೈಕೋರ್ಟ್ ಅನುಮತಿ

BREAKING : ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!

GOOD NEWS: Good news for the people of the state: Health screening at the doorstep is now available statewide!
Share. Facebook Twitter LinkedIn WhatsApp Email

Related Posts

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM1 Min Read

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM1 Min Read

ಸರ್ಕಾರಿ ಶಾಲೆ ಪುನರಾರಂಭ : ವಿಶಿಷ್ಟ ರೀತಿಯಲ್ಲಿ ‘ಜಿಪ್ಲೈನ್ ಬಳಸಿ ತರಗತಿಗೆ ಪ್ರವೇಶಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

04/06/2025 6:54 AM1 Min Read
Recent News

ಮುಂದಿನ ಸಂಸತ್ ಅಧಿವೇಶನದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ನಿರ್ಣಯ | Impeachment motion

04/06/2025 7:29 AM

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM

ಭಾರತ ಮತ್ತೆ 7 ಗುರಿಗಳನ್ನು ಹೊಡೆದುರುಳಿಸಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ | Operation Sindoor

04/06/2025 7:19 AM

Watch video:18 ವರ್ಷದ ಕನಸು ಕೊನೆಗೂ ನನಸು : ಟ್ರೋಫಿ ಗೆಲ್ತಿದ್ದಂತೆಯೇ ಕೊಹ್ಲಿ ಕಣ್ಣೀರು

04/06/2025 7:11 AM
State News
KARNATAKA

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

By kannadanewsnow0504/06/2025 7:22 AM KARNATAKA 1 Min Read

ಬೆಂಗಳೂರು : ನಿನ್ನೆ ರಾತ್ರಿ ಪಂಜಾಬ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ…

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM

ಸರ್ಕಾರಿ ಶಾಲೆ ಪುನರಾರಂಭ : ವಿಶಿಷ್ಟ ರೀತಿಯಲ್ಲಿ ‘ಜಿಪ್ಲೈನ್ ಬಳಸಿ ತರಗತಿಗೆ ಪ್ರವೇಶಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

04/06/2025 6:54 AM

SHOCKING : ಮಂಗಳೂರಲ್ಲಿ ಘೋರ ದುರಂತ : ಆಟೋದಲ್ಲಿ ಚಲಿಸುತ್ತಿರುವಾಗಲೇ ‘ಹೃದಯಾಘಾತದಿಂದ’ ಚಾಲಕ ಸಾವು

04/06/2025 6:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.